ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಮಹಾಮಾರಿ ಸೋಂಕು ಇಂದು ಮತ್ತೊಂದು ಬಲಿ ಪಡೆದುಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ 14 ಜನರು ಸಾವನ್ನಪ್ಪಿದ್ದಾರೆ.
ವಿಜಯಪುರದಲ್ಲಿ 42 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ತಮಗೆ ಸೋಂಕು ಇರುವುದು ದೃಢಪಡುತ್ತಿದ್ದಂತೆಯೇ ಭಯಗೊಂಡು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ನಡುವೆ ಬೆಂಗಳೂರಿನ ಪಾದರಾಯನಪುರದಲ್ಲಿ ಮತ್ತೆ ಮೂರು ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂರು ಸೋಂಕಿತರಿಗೂ ಸೆಕೆಂಡರಿ ಕಾಂಟೆಕ್ಟ್ ನಿಂದಲೇ ವೈರಸ್ ಹರಡಿರುವುದು ತಿಳಿದುಬಂದಿದೆ. ಕೊರೊನಾ ಸೋಂಕಿತರಿಂದ ಪ್ರಾಥಮಿಕ ಸಂಪರ್ಕದಲ್ಲಿರುವ ವ್ಯಕ್ತಿಗಳಿಗಿಂತಲೂ ದ್ವಿತೀಯ ಸಂಪರ್ಕದಲ್ಲಿರುವ ವ್ಯಕ್ತಿಗಳಿಗೆ ವೇಗವಾಗಿ ಹರಡುತ್ತಿರುವುದು ರಾಜ್ಯದಲ್ಲಿ ಇನ್ನಷ್ಟು ಆತಂಕವನ್ನುಂಟುಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ