ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊರೊನಾ ಶಂಕಿತ ಪ್ರಕರಣ ಪತ್ತೆಯಾಗಿದೆ. ಫ್ರಾನ್ಸ್ನಿಂದ ಬಂದಿದ್ದ ಯುವತಿಯಲ್ಲಿ ಕೊರೋನಾ ವೈರಸ್ ಲಕ್ಷಣಗಳು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಫ್ರಾನ್ಸ್ನಿಂದ ಬಂದಿದ್ದ ಯುವತಿಯನ್ನು ಏರ್ಪೋರ್ಟ್ನಲ್ಲಿ ಪ್ರಾಥಮಿಕ ತಪಾಸಣೆ ನಡೆಸಿದಾಗ ಕೊರೊನಾ ಶಾಂಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಯುವತಿಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೊರೋನಾ ಶಂಕಿತ ಯುವತಿ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸದ್ಯ ಟೆಕ್ ಪಾರ್ಕ್ ಬಳಿ ಇರುವ ಪಿಜಿಯಲ್ಲಿ ವಾಸವಿದ್ದಳು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಯುವತಿಯ ರಕ್ತ ಮತ್ತು ಕಫದ ಮಾದರಿಯನ್ನು ಪರೀಕ್ಷೆಗಾಗಿ ರಾಜೀವ್ ಗಾಂಧಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ