Latest

ಪೌರ ಕಾರ್ಮಿಕರಿಗೂ ವಕ್ಕರಿಸಿದ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದಿದೆ. ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು ವಕ್ಕರಿಸಿದೆ.

ಬೆಂಗಳೂರಲ್ಲಿ 19 ಜನ ಪೌರ ಕಾರ್ಮಿಕರಿಗೆ ಸೋಂಕು ತಗುಲಿದೆ. ನ್ಯಾಷನಲ್ ಕಾಲೇಜ್ ಗ್ರೌಂಡ್‍ನಲ್ಲಿ ಕೆಲಸ ಮಾಡುತ್ತಿದ್ದ 19 ಜನ ಪೌರಕಾರ್ಮಿಕರಲ್ಲಿ 7 ಜನ ಪಾದರಾಯನಪುರ ನಿವಾಸಿಗಳು. ಸೋಂಕಿತ ಪಾದರಾಯನಪುರದ ನಿವಾಸಿಗಳನ್ನ ಹಜ್ ಭವನಕ್ಕೆ ಶಿಷ್ಟ್ ಮಾಡಲಾಗಿದೆ. ಉಳಿದ 12 ಜನರ ನಿವಾಸಗಳ ಪತ್ತೆಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಬಸವನಗುಡಿಯ ಬೆಂಗಳೂರು ಒನ್‍ನಲ್ಲಿ ಕೆಲಸ ಮಾಡ್ತಿದ್ದ ಅಧಿಕಾರಿ ಬಿಬಿಎಂಪಿಯ ರೆವಿನ್ಯೂ ಇನ್ಸ್ ಪೆಕ್ಟರ್ ಗೂ ಕೊರೋನಾ ಪಾಸಿಟಿವ್ ಬಂದಿದೆ. ಬೆಂಗಳೂರು ಒನ್‍ಗೆ ಭೇಟಿ ನೀಡಿದ ಎಲ್ಲರಿಗೂ ಈಗ ಆತಂಕ ಶುರುವಾಗಿದೆ.

ಈಗಾಗಲೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,005ಕ್ಕೆ ಏರಿಕೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button