ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಮೈಕ್ರೋ ಕಂಟೇನ್ಮೆಂಟ್ ಝೋನ್ ಸ್ಥಾಪಿಸಲಾಗುವುದು ಹಾಗೂ ಮಾಸ್ಕ್ ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಟೆಸ್ಟ್, ಟ್ರ್ಯಾಕ್, ಟ್ರೀಟ್ ಈ ಮೂರು ಟಿಗಳ ಬಗ್ಗೆ ಪ್ರಧಾನಿಗಳು ಒತ್ತಿ ಹೇಳಿದ್ದು, ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ತಿಳಿಸಿದರು. ಹೀಗಾಗಿ ಮಾಸ್ಕ್ ಧರಸುವುದನ್ನು ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದರು.
ಕಳೆದ ಹತ್ತು ದಿನಗಳಲ್ಲಿ ಸೋಂಕು ಹೆಚ್ಚಳವಾಗಿದೆ. ಹೀಗಾಗಿ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಅಗತ್ಯವಿದ್ದರೆ ಮೈಕ್ರೋ ಕಂಟೈನ್ಮೆಂಟ್ ಝೋನ್‍ಗಳನ್ನು ಮಾಡುವಂತೆ ತಿಳಿಸಲಾಗಿದೆ ಎಂದು ವಿವರಿಸಿದರು.
ಇನ್ನು ರಾಜ್ಯದಲ್ಲಿ ಪ್ರತಿದಿನ 3 ಲಕ್ಷ ಜನರಿಗೆ ಲಸಿಕೆ ಹಾಕಿಸುವ ಗುರಿ ಹೊಂದಲಾಗಿದೆ. ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಅಪಾರ್ಟ್ ಮೆಂಟ್ ಸೇರಿ ಕೆಲ ನಿರ್ಧಿಷ್ಟ ಸ್ಥಳಗಳಲ್ಲಿ ಲಸಿಕೆ ಹಾಕಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ