ಪರಿಸ್ಥಿತಿ ಗಂಭೀರತೆಯನ್ನು ಜನರು ಅರ್ಥಮಾಡಿಕೊಳ್ಳಬೇಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಹರಡದಂತೆ ಮುಂಜಾಗೃತಾ ಕ್ರಾಮವಾಗಿ ರಾಜ್ಯಾ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಒಂದುರೀತಿಯ ಕರ್ಫ್ಯೂ ವಾತಾವರಣವಿದೆ. ಜನರು ಕೂಡ ಪರಿಸ್ಥಿತಿ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು ಅನಗತ್ಯವಾಗಿ ಓಡಾಡುವುದು, ಮನೆಯಿಂದ ಹೊರಬರುವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾಲು, ಹಣ್ಣು, ತರಕಾರಿ ಪೂರೈಕೆಗೆ ಪೊಲೀಸರು ಅಡ್ಡಿ ಪಡಿಸಬಾರದು, ರಾಜ್ಯದಲ್ಲಿ ಕರ್ಪ್ಯೂ ವಾತಾವರಣ ಇರುವುದರಿಂದ ಜನರು ಕಾರಿನಲ್ಲಿ, ದ್ವಿಚಕ್ರ ವಾಹನದಲ್ಲಿ ಓಡಾಟನಡೆಸಬಾರದು. ಒಂದು ವೇಳೆ ವಿನಾಕಾರಣ ಮನೆಯಿಂದ ಹೊರಗಡೆ ಬಂದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಇದಕ್ಕೆ ನಮ್ಮನ್ನು, ಸರ್ಕಾರವನ್ನು ದೂಷಿಸಬೇಡಿ ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದರು.

ಇನ್ನು ಬಡವರಿಗೆ ಅನುಕೂಲವಾಗಲಿ ಎಂದು ಇಂದಿರಾ ಕ್ಯಾಂಟೀನ್ ತೆರೆದಿಡಲು ನಿರ್ಧರಿಸಲಾಗಿತ್ತು. ಆದರೀಗ ಇಂದಿರಾ ಕ್ಯಾಂಟೀನ್ ನಲ್ಲೂ ಹೆಚ್ಚಾಗಿ ಜನರು ಸೇರುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ತಾತ್ಕಾಲಿಕ ಬಂದ್ ಮಾಡಲಾಗುವುದು. 8 ದಿನಗಳ ಕಾಲ ಜನರು ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

ಜನರು ಯುಗಾದಿ ಹಬ್ಬವನ್ನು ಮನೆಯಲ್ಲೇ ಆಚರಿಸಿ, ಆಡಂಬರದ ಹಬ್ಬ ಆಚರಣೆ ಮಾಡುವುದು ಬೇಡ. ಹಬ್ಬಕ್ಕಾಗಿ ವಸ್ತುಗಳನ್ನು ಖರೀದಿ ಮಾಡುವುದಕ್ಕೆ ಮಾರ್ಕೆಟ್‌ಗಳಿಗೆ ಹೋಗುವುದು ಬೇಡ ಎಂದು ವಿನಂತಿ ಮಾಡಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button