Latest

ರಕ್ಷಣಾ ಇಲಾಖೆ ಕಾರ್ಯದರ್ಶಿಗೂ ಕೊರೊನಾ ಪಾಸಿಟೀವ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇತ್ತೀಚೆಗಷ್ಟೇ ರಾಷ್ಟ್ರಪತಿ ಭವನಕ್ಕೂ ಹರಡಿದ್ದ ಕೊರೊನಾ ಸೋಂಕು ಇದೀಗ ರಕ್ಷಣಾ ಇಲಾಖೆ ಕಚೇರಿಯಲ್ಲಿ ಕೂಡ ಕೊರೊನಾ ಸೋಂಕು ಪತ್ತೆಯಾಗಿದೆ.

ರೈಸಿನಾ ಹಿಲ್​ನ ಸೌತ್ ಬ್ಲಾಕ್ ನಲ್ಲಿರುವ ರಕ್ಷಣಾ ಇಲಾಖೆ ಕಚೇರಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಬಂದಿದೆ. ಅದು ರಕ್ಷಣಾ ಇಲಾಖೆಯ ಕಾರ್ಯದರ್ಶಿ ಅಜಯ್ ಕುಮಾರ್ ಅವರಿಗೆ ಕೊರೊನಾ ಪಾಸಿಟೀವ್ ದೃಢಪಟ್ಟಿದೆ.

Home add -Advt

ಅಜಯ್ ಕುಮಾರ್ ಅವರ ರಕ್ಷಣಾ ಇಲಾಖೆ ಕಚೇರಿಯಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಇರುತ್ತಾರೆ ಎಂಬುದು ಆತಂಕಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲ, ಭೂಸೇನಾ ಮತ್ತು ಜಲಸೇನಾ ಮುಖ್ಯಸ್ಥರು ಕೂರುವುದು ಕೂಡ ಇದೇ ಕಚೇರಿಯಲ್ಲಿರುತ್ತಾರೆ.

ವಿಷಯ ಗೊತ್ತಾಗುತ್ತಿದ್ದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಚೇರಿಗೆ ಬರುವುದನ್ನು ನಿಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಚೇರಿಯಲ್ಲಿ ಒಟ್ಟು 35 ನೌಕರರು ಕೆಲಸ ಮಾಡುತ್ತಿದ್ದಾರೆ. ಎಲ್ಲರನ್ನೂ ಈಗ ಕೊರೋನಾ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ರಕ್ಷಣಾ ಇಲಾಖೆಯ ವಕ್ತಾರರು ನಿರಾಕರಿಸಿದ್ದಾರೆ.

ಇದಕ್ಕೂ ಮೊದಲು ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುವ 125 ಕುಟುಂಬಗಳನ್ನು ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ರಕ್ಷಣಾ ಇಲಾಖೆಯ ಅಧಿಕಾರಿಗೇ ಕೊರೋನಾ ಸೋಂಕು ದೃಢಪಟ್ಟಿದೆ.

Related Articles

Back to top button