ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 10 ಜನರು ಕೊರೊನಾಗೆ ಸಾವು

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ದೆಹಲಿಯ ನಿಜಾಮುದ್ದೀನ್​ ಪ್ರದೇಶದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ತೆಲಂಗಾಣದ 6 ಮಂದಿ ಸೇರಿದಂತೆ ಒಟ್ಟು 10 ಜನ ಮಾರಣಾಂತಿಕ ಕೊರೊನಾ ಸೊಂಕಿಗೆ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಾದಾಲ್ಲಿ ಭಾಗಿಯಾಗಿದ್ದ 2000 ಜನರನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

ಕ್ವಾರಂಟೈನ್​ನಲ್ಲಿ ಇರಿಸಲಾಗಿರುವ 24 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುವ ಆತಂಕ ಎದುರಾಗಿದೆ. ಕೊರೋನಾ ಭೀತಿಯಿಂದ ನಿಜಾಮುದ್ದೀನ್​ನಿಂದ 1,034 ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ.

ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯನ್ನು ಏರ್ಪಡಿಸಿತ್ತು. ಇದರಲ್ಲಿ ಇಂಡೋನೇಷ್ಯಾ ಹಾಗೂ ಮಲೇಷ್ಯಾದವರು ಸೇರಿ ಸುಮಾರು 2 ಸಾವಿರಕ್ಕೂ ಅಧಿಕ ಜನ ಭಾಗವಹಿಸಿದ್ದರು. ಮಾರ್ಚ್ 1ರಿಂದ 15ರವರೆಗೆ ದೆಹಲಿಯ ಪಶ್ಚಿಮದ ನಿಜಾಮುದ್ದೀನ್‍ನಲ್ಲಿ ಈ ಧಾರ್ಮಿಕ ಸಭೆ ನಡೆದಿತ್ತು. ಈ ಕಾರ್ಯಕ್ರಮದ ನಂತರವೂ ತುಂಬಾ ಜನ ಜಮಾತ್‍ನ ಮರ್ಕಜ್‍ನಲ್ಲಿ ಉಳಿದುಕೊಳ್ಳುವುದನ್ನು ಮುಂದುವರಿಸಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಧಾರ್ಮಿಕ ಸಭೆಯನ್ನು ಆಯೋಜಿಸಿದ್ದ ಮೌಲಾನಾ ವಿರುದ್ಧ ದೆಹಲಿ ಸರ್ಕಾರ ಎಫ್​ಐಆರ್​ ದಾಖಲಿಸಿದೆ. ದೆಹಲಿಯ ಮೂರ್ನಾಲ್ಕು ಆಸ್ಪತ್ರೆಗಳಲ್ಲಿ ನಿಜಾಮುದ್ದೀನ್​ ಸಭೆಗೆ ಆಗಮಿಸಿದ್ದವರನ್ನು ಸೇರಿಸಿ, ನಿಗಾದಲ್ಲಿ ಇರಿಸಲಾಗಿದೆ. ಅವರಲ್ಲಿ 1 ಆಸ್ಪತ್ರೆಯ 24 ಜನರಿಗೆ ಸೋಂಕು ಹರಡಿರುವುದು ಖಚಿತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button