ಪ್ರಗತಿವಾಹಿನಿ ಸುದ್ದಿ; ಇಂದೋರ್: ಮಾರಣಾಂತಿಕ ಕೊರೋನಾ ಸೋಂಕಿಗೆ ಮಧ್ಯಪ್ರದೇಶದ ಇಂಧೋರ್ ನಲ್ಲಿ ವೈದ್ಯರೊಬ್ಬರು ಬಲಿಯಾಗಿದ್ದಾರೆ. ಡಾ. ಶತ್ರುಘನ್ ಪಂಜ್ವಾನಿ ಕೊರೋನಾ ವೈರಸ್ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ಧಾರೆ.
ಇಂದೋರ್ನ ಅರವೆಂದೋ ಆಸ್ಪತ್ರೆಯಲ್ಲಿ ಇಂದು ಮುಂಜಾವು 4ಗಂಟೆಗೆ ಡಾ. ಶತ್ರುಘನ್ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆಂದು ಭಾರತೀಯ ವೈದ್ಯಕೀಯ ಸಂಘ ದೃಢಪಡಿಸಿದೆ.
ದೇಶಾದ್ಯಂತ ಲಾಕ್ ಡೌನ್ ಘೋಶಿಸಿದ್ದರೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ ಸೋಂಕಿತರನ್ನು ಗುಣಪಡಿಸುವ ನಿಟ್ಟಿನಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸೇವೆಸಲ್ಲಿಸುತ್ತಿದ್ದಾರೆ. ಆದರೀಗ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಲ್ಲೇ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ದೇಶದಲ್ಲಿ ಈವರೆಗೆ ಸೋಂಕಿಗೆ ಒಳಗಾಗಿರುವವರ ಸಂಖ್ಯೆ 6,000 ಗಡಿ ಸಮೀಪಿಸಿದೆ. ಇವತ್ತು ಗುರುವಾರ ಬೆಳಗ್ಗೆಯವರೆಗೆ ಸತ್ತವರ ಸಂಖ್ಯೆ 166ಕ್ಕೆ ಏರಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಕೊರೋನಾ ಸೋಂಕು ಹರಡಿದ್ದು, ಸಾವಿನ ಸಂಖ್ಯೆ 70ಕ್ಕೇರಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ