ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎರಡು ತಿಂಗಳ ಕಾಲ ರಾಜ್ಯದ ಜನತೆ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿ ಮಾತನಾಡಿದ ಅವರು, ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದೆ. 45 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆ ಹಾಕಿಸಿಕೊಳ್ಳಿ. ಈ ಬಗ್ಗೆ ಯಾವುದೇ ನಿರ್ಲಕ್ಷ್ಯಗಳು ಬೇಡ. 700ಕ್ಕೂ ಹೆಚ್ಚು ರೂಪಾಂತರಿ ಕೊರೊನಾ ವೈರಾಣು ಪತ್ತೆಯಾಗಿದೆ. ಇದು ಅತಿ ವೇಗವಾಗಿ ಹರಡುತ್ತದೆ. ಆದರೆ ನಮ ರಾಜ್ಯದಲ್ಲಿ ಇಂತಹ ಕೇಸ್ ಪತ್ತೆಯಾಗಿಲ್ಲ. ಆದರೆ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಕಳೆದ ನಾಲ್ಕು ತಿಂಗಳಲ್ಲೇ ಅತಿ ಹೆಚ್ಚು ಕೋವಿಡ್ ಕೇಸ್ ಗಳು ಪತ್ತೆಯಾಗಿವೆ. ಇದು ಆತಂಕಕ್ಕೆ ಕಾರಣವಾಗಿದೆ ಎಂದರು.
ಕೊರೂನಾ ಸಾವನ್ನು ತಡೆಯುವುದೇ ನಮ್ಮ ಗುರಿ. ಒಬ್ಬರಿಗೆ ಕೊರೊನಾ ಸೋಂಕು ದೃಢವಾದರೆ 20 ಜನ ಪ್ರಾಥಮಿಕ ಸಂಪರ್ಕಿತರಿಗೆ 24 ಗಂಟೆಗಳಲ್ಲಿ ಟೆಸ್ಟ್ ಮಾಡಿಸಬೇಕಾಗುತ್ತದೆ. ಪ್ರತಿಯೊಬ್ಬರು ಕೂಡ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಹೊಸ ಕೋವಿಡ್ ನಿಯಮಗಳನ್ನು ಪಾಲಿಸಿ, ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಂಡು ಅನಗತ್ಯ ಓಡಾಟದಿಂದ ದೂರವಿರುವಂತೆ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ