ವಿದ್ಯುತ್ ಬಿಲ್ ಪಾವತಿಗೆ ಕಾಲಾವಕಾಶ ನೀಡಿದ ಕೇಂದ್ರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿದ್ಯುತ್ ಬಿಲ್ ಪಾವತಿಗೆ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ.

ಈಗಾಗಲೇ ತೆರಿಗೆ ಪಾವತಿ, ಬ್ಯಾಂಕ್ ಸಾಲ, ಇಎಂಐ ಪಾವತಿಗೆ ಮೂರು ತಿಂಗಳ ಕಾಲಾವಕಾಶ ನೀಡಿದ್ದ ಕೇಂದ್ರ ಸರ್ಕಾರ ಇದೀಗ ವಿದ್ಯುತ್ ಬಿಲ್ ಪಾವತಿಗೆ ಕೂಡ ಮೂರು ತಿಂಗಳ ವಿನಾಯ್ತಿ ನೀಡಬೇಕೆಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಸರ್ಕಾರಗಳಿಗೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಗ್ರಾಹಕರಿಗೆ ವಿದ್ಯುತ್ ಬಿಲ್ ಕಟ್ಟಲು ಮೂರು ತಿಂಗಳ ಕಾಲಾವಕಾಶ ಸಿಗಲಿದೆ. ಈ ಅವಧಿಯಲ್ಲಿ ಯಾವುದೇ ದಂಡ ವಿಧಿಸುವುದಿಲ್ಲ. ಮೂರು ತಿಂಗಳ ನಂತರ ವಿದ್ಯುತ್ ಬಿಲ್‍ನ್ನು ಪಾವತಿಸಬೇಕು ಎಂದು ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button