Latest

ಮದುವೆಯಾದ ಮೊದಲ ದಿನವೇ ಕೊರೊನಾಗೆ ಬಲಿಯಾದ ವರ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಭಯದ ವಾತಾವರಣ ನಿರ್ಮಿಸುತ್ತಿದೆ. ಬೆಳಿಗ್ಗೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ವರ ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಶಶಿಕುಮಾರ್ (27) ಮೃತ ದುರ್ದೈವಿ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಈ ಘತನೆ ನಡೆದಿದೆ.

ನಿನ್ನೆ ಬೆಳಿಗ್ಗೆ ಮದುವೆಯಾಗಿದ್ದ ವರ ಮದುವೆ ಮುಗಿಸಿಕೊಂಡು ಮಾವನ ಮನೆಗೆ ತೆರಳಿದ್ದ. ಸಂಜೆ ಏಕಾಏಕಿ ಮೃತಪಟ್ಟಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗಿತ್ತು. ಆದರೆ ಇದೀಗ ವರ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button