
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಹೊರ ರಾಜ್ಯದಿಂದ ಬರುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಕೊಗೋಳಿ, ಕಾಗವಾಡ ಮಿರಜ್, ಅಥಣಿ, ಜತ್, ಸದಲಗ, ಇಚಲರಂಜಿಗಳಲ್ಲಿ ಚೆಕ್ ಪೋಸ್ಟ್ ಆರಂಭಿಸಲಾಗಿದ್ದು, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಯಾಣಿಕರಿಗೆ ಮಾರ್ಗಸೂಚಿ ಪಾಲಿಸುವಂತೆ ಡಿಸಿ ಹಾಗೂ ಎಸ್ ಪಿ ಸೂಚನೆ ನೀಡಿದ್ದಾರೆ.
ಎಲ್ಲಾ ಖಾಸಗಿ ಹಾಗೂ ಕೆ ಎಸ್ ಆರ್ ಟಿಸಿ ಬಸ್ ಗಳಿಗೂ ಕಟ್ಟುನಿಟ್ಟಿನ ಸೂಚನೆ ನಿಡಲಾಗಿದ್ದು, ಆರ್ ಟಿಪಿಸಿಆರ್ ಟೆಸ್ಟ್ ವರದಿ ಇಲ್ಲದೇ ಯಾವುದೇ ಪ್ರಯಾಣಿಕರನ್ನು ಬಸ್ ಗೆ ಹತ್ತಿಸಿಕೊಳ್ಳುವಂತಿಲ್ಲ ಎಂದು ತಿಳಿಸಲಾಗಿದೆ.
ಮಹಾರಾಷ್ಟ್ರ ಮತ್ತು ಕೇರಳವನ್ನು ಹೊರತುಪಡಿಸಿ ಇತರ ರಾಜ್ಯಗಳಿಂದ ಬರುವ ಪ್ರಯಾಣಿಕರು, ಅಂದರೆ ಗುಜರಾತ್, ಮಧ್ಯಪ್ರದೇಶ ಮುಂತಾದ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಚೆಕ್ ಪೋಸ್ಟ್ ಗಳಲ್ಲಿ ನಿಲ್ಲಿಸಿ ತಪಾಸಣೆ ನಡೆಸುವ ಅಗತ್ಯವಿಲ್ಲ ಎಂದು ಸೂಚಿಸಲಾಗಿದೆ. ಒಟ್ಟಾರೆ ಕೊರೊನಾ ಎರಡನೇ ಎಲೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಿಂದ ಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಲಾಗುತ್ತಿದೆ.