ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಎದುರಾಗಿದೆ. ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕೇರಳ-ಮೈಸೂರು ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇರಳದಿಂದ ಬರುವ ಎಲ್ಲಾ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗಿದೆ. ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತಿದ್ದು, ಕೋವಿಡ್ ಟೆಸ್ಟ್ ವರದಿ ಪರಿಶೀಲನೆ ನಡೆಸಲಾಗುತ್ತಿದೆ.
ಇನ್ನು ಮಹಾರಾಷ್ಟ್ರದಲ್ಲೂ ಮಹಾಮಾರಿ ಅಟ್ಟಹಾಸ ಹೆಚ್ಚುತ್ತಿದೆ. ಆದರೆ ಗಡಿ ಜಿಲ್ಲೆ ಬೆಳಗಾವಿಯಲ್ಲೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ. ಚೆಕ್ ಪೋಸ್ಟ್ ನಲ್ಲಿ ಯಾವುದೇ ತಪಾಸಣೆಯಿಲ್ಲದೇ ಪ್ರಯಾಣಿಕರನ್ನು ಬಿಡಲಾಗುತ್ತಿದೆ ಯಾವುದೇ ಆರೋಗ್ಯ ಸಿಬ್ಬಂದಿಯನ್ನು ನೇಮಕ ಮಾಡಲಾಗಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ