ಕೋಲಾರದಲ್ಲಿ 18 ಜನರಲ್ಲಿ ಕೊರೊನಾ ನೆಗೆಟೀವ್

ಪ್ರಗತಿವಾಹಿನಿ ಸುದ್ದಿ; ಕೋಲಾರ: ಕೋಲಾರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ 18 ಜನರ ವರದಿ ನೆಗೆಟಿವ್ ಬಂದಿದ್ದು, ಕೋಲಾರ ಜನತೆ ಹಾಗೂ ಜಿಲ್ಲಾಡಳಿತ ಕೊಂಚ ರಿಲೀಫ್ ಆಗಿದೆ.

ಜಿಲ್ಲೆಯ ಎರಡು ಕುಟುಂಬಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲ್ ನರಸಾಪುರದ ಸೋಂಕಿತ ವ್ಯಕ್ತಿ ಸಂಪರ್ಕ ಹೊಂದಿದ್ದ ಪರಿಣಾಮ ಜಿಲ್ಲೆಯ ಸುಮಾರು 21 ಜನರನ್ನು ಹೋಮ್ ಕ್ವಾರಂಟೇನ್ ಮಾಡಲಾಗಿತ್ತು. ಅಲ್ಲದೆ 21 ಜನರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 18 ಜನರ ವರದಿ ನೆಗಟಿವ್ ಬಂದಿದೆ. ಉಳಿದ ಮೂವರ ವರದಿಗಾಗಿ ಕಾಯಲಾಗುತ್ತಿದೆ.

ಕೋಲಾರ ಗಡಿಭಾಗವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೈಲು ನರಸಾಪುರ ಗ್ರಾಮ ಪಂಚಾಯಿತಿ ಸದಸ್ಯ ಕೊರೊನಾ ಸೋಂಕಿತ ವ್ಯಕ್ತಿ, ಕೋಲಾರ ತಾಲೂಕಿನ ನರಸಾಪುರ ಗ್ರಾಮದ ಎರಡು ಕುಟುಂಬಗಳೊಂದಿಗೆ ಸಂಪರ್ಕ ಹೊಂದಿದ್ದ. ಹೀಗಾಗಿ ನರಸಾಪುರ ಗ್ರಾಮದ ಸುಮಾರು 21 ಜನರನ್ನ ಹೋಮ್ ಕ್ವಾರಂಟೇನ್ ಮಾಡಲಾಗಿತ್ತು. ಈ ಮೂಲಕ ನರಸಾಪುರ, ವೇಮಗಲ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಇದೀಗ 18 ಜನರ ವರದಿ ನೆಗಟಿವ್ ಬಂದಿದ್ದು, ಇನ್ನೂ ಮೂವರ ವರದಿ ಬರಬೇಕಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button