ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಚಿಕ್ಕಮಕ್ಕಳಲ್ಲಿ ಸೋಂಕು ವೇಗವಾಗಿ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಶಾಲೆ ಆರಂಭಕ್ಕೆ ಸರ್ಕಾರ ಮುಂದಾಗಿರುವ ನಡುವೆಯೇ ಈಗ ಮಕ್ಕಳಲ್ಲಿ ಸೋಂಕು ಪತ್ತೆಯಾಗುತ್ತಿದೆ. ಬೆಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ 505 ಮಕ್ಕಳಲ್ಲಿ ಕೊರೊನಾ ಸೋಂಕು ದೃಢ ಪಟ್ಟಿದೆ. ಅವರಲ್ಲಿ 259 ಗಂಡು ಮಕ್ಕಳು ಹಾಗೂ 246 ಹೆಣ್ಣು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಎಲ್ಲರೂ 15 ವರ್ಷದೊಳಗಿನವರಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಹೆಚ್ಚುತ್ತಿದ್ದು, ಆಗಸ್ಟ್ 15ರ ಬಳಿಕ ರಾಜ್ಯದಲ್ಲಿ ಇನ್ನಷ್ಟು ಕಠಿಣ ನಿಯಮಗಳು ಜಾರಿಗೆ ಬರುವ ಸಾಧ್ಯತೆ ಇದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಈಗಿರುವ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೆ ಬರುವ ಸದಹ್ಯತೆ ಇದೆ. ದಿನದಿಂದ ದಿನಕ್ಕೆ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದ್ದು, ಮಹಾಮಾರಿ ಕಟ್ಟಿಹಾಕುವ ನಿಟ್ಟಿನಲ್ಲಿ ಆಗಸ್ಟ್ 15ರ ಬಳಿಕ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಯಾದರೂ ಅಚ್ಚರಿಯಿಲ್ಲ ಎನ್ನಲಾಗಿದೆ.
ಶಾಸಕ ಸತೀಶ್ ರೆಡ್ಡಿ ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ