ಒಂದೇ ದಿನದಲ್ಲಿ 1,17,100 ಜನರಲ್ಲಿ ಕೊರೊನಾ ಸೋಂಕು ದೃಢ; ಮಹಾರಾಷ್ಟ್ರದಲ್ಲಿಯೇ 36,265 ಹೊಸ ಪ್ರಕರಣ ದಾಖಲು
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ ಆತಂಕದ ನಡಿವೆ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಕಳೆದ 7 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ 1,17,100 ಜನರಲ್ಲಿ ಸೋಂಕು ಪತ್ತೆಯಾಗಿದೆ.
24 ಗಂಟೆಯಲ್ಲಿ 30,836 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 302 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 483178 ಕ್ಕೆ ಏರಿಕೆಯಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, 36,265 ಹೊಸ ಪ್ರಕರಣಗಳು ವರದಿಯಾಗಿವೆ. 876 ಜನರಲ್ಲಿ ರೂಪಾಂತರಿ ವೈರಸ್ ಒಮಿಕ್ರಾನ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸುವಂತೆ ಒತ್ತಾಯಗಳು ಕೇಳಿಬಂದಿವೆ.
ಈ ನಡುವೆ ಮಹಾರಾಷ್ಟ್ರ ಸರ್ಕಾರವು ಸ್ಥಳೀಯ ರೈಲುಗಳನ್ನು ಮುಚ್ಚುವುದಿಲ್ಲ ಎಂದು ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ. ವಾರಾಂತ್ಯದ ಲಾಕ್‌ಡೌನ್ ಮತ್ತು ರಾತ್ರಿ ಕರ್ಫ್ಯೂ ಅನ್ನು ಪರಿಗಣಿಸಲಾಗುತ್ತಿದೆ ಆದರೆ ಸರ್ಕಾರ ಇನ್ನೂ ನಿರ್ಧಾರಕ್ಕೆ ಬಂದಿಲ್ಲ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ನಿರ್ಬಂಧಗಳ ಬಗ್ಗೆ ನಿರ್ಧರಿಸುತ್ತಾರೆ ಎಂದು ತಿಳಿಸಿದ್ದಾರೆ.
ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಿಲ್ಲ. ಅಲ್ಲದೆ, ಸಾವುನೋವುಗಳ ಸಂಖ್ಯೆ ಹೆಚ್ಚಿಲ್ಲ, ವೈದ್ಯಕೀಯ ಆಮ್ಲಜನಕದ ಬೇಡಿಕೆ ಹೆಚ್ಚಿಲ್ಲ. ಮುಂದಿನ ದಿನಗಳಲ್ಲಿ ಸರ್ವೆ ನಡೆಸುತ್ತೇವೆ ತಿಳಿಸಿದರು. ಮೂರನೇ ಅಲೆ ವಿರುದ್ಧ ಹೋರಾಡಲು ರಾಜ್ಯದ ಆರೋಗ್ಯ ಇಲಾಖೆ ಸಮರ್ಥವಾಗಿದ್ದು, ಆರ್ಥಿಕ ಚಟುವಟಿಕೆಗಳ ಮೇಲೆ ಯಾವುದೇ ತೊಂದರೆಯಾಗದಂತೆ ಕಠಿಣ ನಿಯಮಗಳನ್ನು ಜಾರಿಗೊಳಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
5 ಜಿಲ್ಲೆಗಳಲ್ಲಿ ಒಮಿಕ್ರಾನ್ ಅಟ್ಟಹಾಸ; ವ್ಯಾಕ್ಸಿನ್ ಪಡೆಯದಿದ್ದರೆ ಜೀವಕ್ಕೆ ತೊಂದರೆ; ಎಚ್ಚರಿಕೆ ನೀಡಿದ ಆರೋಗ್ಯ ಸಚಿವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ