
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ರೂಪಾಂತರಿ ವೈರಸ್ ಒಮಿಕ್ರಾನ್ ಜತೆಗೆ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,68,063 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.
ಕೋವಿಡ್ ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಗಣನೀಯವಾಗಿ ಏರುತ್ತಿದ್ದು, 24 ಗಂಟೆಯಲ್ಲಿ 277 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 484213ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 821446 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 69959 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಈ ನಡುವೆ ದೇಶದಲ್ಲಿ ಒಮಿಕ್ರಾನ್ ಅಟ್ಟಹಾಸ ಹೆಚ್ಚುತ್ತಿದ್ದು, ರೂಪಾಂತರಿ ವೈರಸ್ ಸೋಂಕಿತರ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ.
ಬಿದ್ದು ಗಾಯಗೊಂಡ ಸಿದ್ಧೇಶ್ವರ ಸ್ವಾಮೀಜಿ; ಆಸ್ಪತ್ರೆಗೆ ದಾಖಲು