Latest

ಒಮಿಕ್ರಾನ್ ನಡುವೆ ಕೊರೊನಾ ಸ್ಫೋಟ; ಒಂದೇ ದಿನದಲ್ಲಿ 2.71 ಲಕ್ಷಕ್ಕೂ ಹೆಚ್ಚು ಜನರಲ್ಲಿ ಸೋಂಕು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 2.71,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 314 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 486066 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 1550377 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 138331 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ಅಟ್ಟಹಾಸದ ನಡುವೆ ದೇಶದಲ್ಲಿ ರೂಪಾಂತರಿ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, 7748 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.

 

Home add -Advt

Related Articles

Back to top button