Latest

ಕೋವಿಡ್ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ; ಪಾಸಿಟಿವಿಟಿ ರೇಟ್ ನಲ್ಲೂ ಏರಿಕೆ: 893 ಜನರ ಸಾವು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದೆಯಾದರೂ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 2,34,281 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಶೇ.13ರಷ್ಟಿದ್ದ ದಿನದ ಪಾಸಿಟಿವಿಟಿ ರೇಟ್ ಕೂಡ ಹೆಚ್ಚಿದ್ದು, ಶೇ.14.50ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಕೋವಿಡ್ ಮಹಾಮಾರಿಗೆ 893 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 494091 ಕ್ಕೆ ಏರಿದೆ.

Home add -Advt

ದೇಶದಲ್ಲಿ 1884937 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 352784 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆ ಭಾಗವನ್ನು ಆಕರ್ಷಣೀಯವಾಗಿಸಲು ಹೋಗಿ ಪೇಚಿಗೆ ಸಿಲುಕಿದ ನಟಿ

Related Articles

Back to top button