Latest

ಕೊರೊನಾ ಸ್ಫೋಟ; ಒಂದೇ ದಿನದಲ್ಲಿ 703 ಜನ ಬಲಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ 3,47,254 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ಅಟ್ಟಹಾಸದ ನಡುವೆ ರೂಪಾಂತರಿ ವೈರಸ್ ಒಮಿಕ್ರಾನ್ ಕೂಡ ವ್ಯಾಪಕವಾಗಿ ಹರಡುತ್ತಿದ್ದು, 9,692 ಜನರಲ್ಲಿ ಒಮಿಕ್ರಾನ್ ದೃಢಪಟ್ಟಿದೆ.

ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಒಂದೇ ದಿನದಲ್ಲಿ ಭಾರಿ ಏರಿಕೆಯಾಗಿದ್ದು, 703 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 488396 ಕ್ಕೆ ಏರಿಕೆಯಾಗಿದೆ.

Home add -Advt

ದೇಶದಲ್ಲಿ 2018825 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 251777 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ವಾರಾಂತ್ಯದ ಕರ್ಫ್ಯೂ: ಮಹತ್ವದ ನಿರ್ಧಾರ: ಸಿಎಂ ಬೊಮ್ಮಾಯಿ

Related Articles

Back to top button