
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ದಾಖಲೆಯ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 4,12,262 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,10,77,410ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 3,980 ಜನರು ಸೋಂಕಿಗೆ ಬಲಿಯಾಗುವ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 23,01,68ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 35,66,398 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,72,80,844 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,29,113 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 16,25,13,339 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ