ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಜನರು ಕೊಂಚ ನಿಟ್ಟುಸಿರುಬಿಡುವಂತಾಗಿದೆ. 70 ದಿನಗಳ ಬಳಿಕ ಮೊದಲ ಬಾರಿಗೆ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ 84,332 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ.
24 ಗಂಟೆಯಲ್ಲಿ 4,002 ಜನರು ಸೋಂಕಿಗೆ ಬಲಿಯಾಗಿದ್ದು, ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,67,081ಕ್ಕೆ ಏರಿಕೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ.
ದೇಶದಲ್ಲಿ 10,80,690 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,79,11,384 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,21,311 ಜನರು ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 24,96,00,304 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
3 ಅಂಬುಲನ್ಸ್ ಕೊಡುಗೆ ನೀಡಿ, ಸ್ವತಃ ಅಂಬುಲನ್ಸ್ ಚಾಲನೆ ಮಾಡಿದ ಅಂಜಲಿ ನಿಂಬಾಳಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ