Latest

ಕೊರೊನಾ 2ನೇ ಅಲೆಯಲ್ಲಿ ಹೊಸ ದಾಖಲೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಎರಡನೆ ಅಲೆ ಅಟ್ಟಹಾಸದ ಬಳಿಕ ಇದೇ ಮೊದಲಬಾರೊಗೆ ಕೊರೊನಾ ಸೊಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಇಳಿಕೆಯಾಗಿದೆ.  ಕಳೆದ 24 ಗಂಟೆಯಲ್ಲಿ 86,498 ಜನರಲ್ಲಿ ಸೋಂಕು ಪತ್ತೆಯಾಗಿದೆ. 2 ತಿಂಗಳ ಬಳಿಕ ಮೊದಲಬಾರಿ 1 ಲಕ್ಷಕ್ಕೂ ಕಡಿಮೆ ಕೇಸ್ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2123 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,51,309ಕ್ಕೆ ಏರಿಕೆಯಾಗಿದೆ.

Home add -Advt

13,03,702 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,73,41,462 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,82,282 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ದೇಶದಲ್ಲಿ ಈವರೆಗೆ 23,61,98,726 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Related Articles

Back to top button