
ಪ್ರಗತಿವಾಹಿನಿ ಸುದ್ದಿ; ಮುಂಬೈ: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚುತ್ತಿದ್ದು, ದೇಶದಲ್ಲಿ ಕೋವಿಡ್ 19 ಮೂರನೇ ಬಲಿ ಪಡೆದುಕೊಂಡಿದೆ. ಕಲಬುರಗಿಯಲ್ಲಿ ಓರ್ವ, ದೆಹಲಿಯಲ್ಲಿ ಓರ್ವಾ ಮಹಿಳೆ ಬಳಿಕ ಇದೀಗ ಮಹಾರಾಷ್ಟ್ರ ರಾಜಧಾನಿ ಮುಂಬೈಯಲ್ಲಿ ಕೊರೊನಾ ಸೋಂಕಿಗೆ ಮಹಿಳೆ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಮುಂಬೈ ಕಸ್ತೂರಬಾ ಆಸ್ಪತ್ರೆಯಲ್ಲಿ 64 ವರ್ಷದ ಕೊರೊನಾ ಸೋಂಕಿತ ಮಹಿಳೆ ಮಂಗಳವಾರ ಮೃತಪಟ್ಟಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾಗೆ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ