Latest

ಲಕ್ಷ ಗಡಿ ದಾಟಿದ ಸಾವಿನ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಸೋಂಕಿಗೆ ಬಲಿಯಾದವರ ಸಂಖ್ಯೆ 1 ಲಕ್ಷ ಗಡಿ ದಾಟಿದೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 79,476 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 64,73,545ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Related Articles

ಕಳೆದ 24 ಗಂಟೆಯಲ್ಲಿ 1,069 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,00,842 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,44,996 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 54,27,707 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button