ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 134 ಜನ ಬಲಿಯಾಗಿದ್ದಾರೆ. 3,722 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಸೋಂಕಿತರ ಸಂಖ್ಯೆ 78,003ಕ್ಕೆ ಏರಿಕೆಯಾಗಿದೆ.
ಈವರೆಗೆ ಮಹಾಮಾರಿ ಕೊರೊನಾ 2,545 ಮಂದಿಯನ್ನು ಬಲಿ ಪಡೆದಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಮಂದಿ ಕೊರೊನಾಗೆ ತುತ್ತಾಗಿದ್ದಾರೆ. ಈವರೆಗೆ ಮಹಾರಾಷ್ಟ್ರದಲ್ಲಿ 975 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 25,922 ಮಂದಿಗೆ ಈವರೆಗೆ ಸೋಂಕು ತಗುಲಿದೆ. 5,547 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಗುಜರಾತ್‍ನಲ್ಲಿ 9,268 ಮಂದಿ ಸೋಂಕಿಗೆ ತುತ್ತಾಗಿದ್ದು, 566 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 9,227 ಮಂದಿಗೆ ಕೊರೊನಾ ತಗುಲಿದ್ದು, 64 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 7,998 ಮಂದಿ ಕೊರೊನಾಗೆ ತುತ್ತಾಗಿದ್ದು, 106 ಮಂದಿ ಮೃತಪಟ್ಟಿದ್ದಾರೆ. ಸುಮಾರು 2,858 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.
ಆಂಧ್ರಪ್ರದೇಶದಲ್ಲಿ 2,137 ಮಂದಿಗೆ ಸೋಂಕು ತಗುಲಿದ್ದು, 47 ಮಂದಿ ಸಾವನ್ನಪ್ಪಿದ್ದಾರೆ. 1,142 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ತೆಲಂಗಾಣದಲ್ಲಿ 1,367 ಮಂದಿ ಕೊರೊನಾ ತುತ್ತಾಗಿದ್ದು, 34 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ. ಕೇರಳದಲ್ಲಿ 535 ಮಂದಿಯಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದ್ದು, 4 ಸೋಂಕಿತರು ಮೃತಪಟ್ಟಿದ್ದಾರೆ. 490 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ.
ಕರ್ನಾಟಕದಲ್ಲಿ ಈವರೆಗೆ 964 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 33ಕ್ಕೆ ಏರಿದೆ. ಒಟ್ಟು 451 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ