ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ತುಮಕೂರಿನ ಓರ್ವ ವ್ಯಕ್ತಿ ಸಾವನ್ನಪ್ಪುವ ಮೂಲಕ ದೇಶದಲ್ಲಿ ಕೊರೋನಾ ವೈರಸ್​ಗೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ 144 ಹೊಸ ಸೋಂಕಿತ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈ ವರೆಗೆ 834 ಕೊರೋನಾ ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿವೆ. ದೇಶದಲ್ಲಿ ಇದುವರೆಗೂ ಪತ್ತೆಯಾದ ಕೊರೋನಾ ಪ್ರಕರಣಗಳ ಪೈಕಿ ಒಂದೇ ದಿನ ದಾಖಲಾದ ಅತಿಹೆಚ್ಚು ಸೋಂಕಿತ ಪ್ರಕರಣ ಶುಕ್ರವಾರದ್ದಾಗಿದೆ.

ಕರ್ನಾಟಕದಲ್ಲಿ ನಿನ್ನೆ 7 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಉಳಿದಂತೆ, ಕೇರಳ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್ ರಾಜ್ಯಗಳಲ್ಲೂ ಹಲವು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿ ಬೆಂಗಳೂರು ಒಂದರಲ್ಲೇ ನಿನ್ನೆ ಬೆಂಗಳೂರೊಂದರಲ್ಲೇ 4 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿದ್ದವು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ 10 ತಿಂಗಳ ಮಗುವಿಗೂ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಉಳಿದಂತೆ ತುಮಕೂರಿನಲ್ಲಿ ಓರ್ವ, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

Related Articles

Back to top button