Latest

ಒಂದೇ ದಿನದಲ್ಲಿ ದಾಖಲೆಯ 2.95 ಲಕ್ಷ ಜನರಲ್ಲಿ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಲೆ ಅಬ್ಬರ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದಾಖಲೆ ಪ್ರಮಾಣದಲ್ಲಿ 2,95,041 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,56,16,130ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚಿದ್ದು, 24 ಗಂಟೆಯಲ್ಲಿ 2,023 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,82,553ಕ್ಕೆ ಏರಿಕೆಯಾಗಿದೆ.

Home add -Advt

ಇನ್ನು ದೇಶದಲ್ಲಿ 21,57,538 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,32,76,039 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,67,457 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 13,01,19,310 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಕೊರೊನಾ ಸೋಂಕಿಗೆ ಬಾಲಿವುಡ್ ನಟ ಬಲಿ

Related Articles

Back to top button