ಕೊರೊನಾ ಸೋಂಕಿನಿಂದ 101 ಜನರು ಗುಣಮುಖ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಒಂದೆಡೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದರೆ, ಇನ್ನೊಂದೆಡೆ ಸೋಂಕು ಪೀಡಿತರಲ್ಲಿ ಹಲವರು ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿರುವುದು ಒಳ್ಳೆಯ ವಿಚಾರ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಮಾರಕ ಕೊರೋನಾ ಸೋಂಕಿಗೆ ಇಂದು ಮೂವರು ಸಾವನ್ನಪ್ಪಿದ್ದಾರೆ. ಈ ವರೆಗೆ 101 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿಸಿದೆ.

ದೇಶಾದ್ಯಂತ ಇದುವರೆಗೆ ಒಟ್ಟು 1,251 ಪ್ರಕರಣಗಳು ದಾಖಲಾಗಿವೆ. ಕಳೆದ‌ 24 ಗಂಟೆಯಲ್ಲಿ 227 ಪ್ರಕರಣಗಳು ಬೆಳಕಿಗೆ ಬಂದಿವೆ. ಇದುವರೆಗೂ ಕೊರೋನಾ ಸೋಂಕಿತರಲ್ಲಿ 101 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಧಿಕ ಸಂಖ್ಯೆಯಲ್ಲಿ ಮಾಸ್ಕ್ ಸಿದ್ದಪಡಿಸಲಾಗುತ್ತಿದೆ. ಲಾಕ್ ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ.

ಹಲವು ರಾಜ್ಯಗಳಲ್ಲಿರುವ 23 ಲಕ್ಷ ವಲಸಿಗರಿಗೆ ಊಟ ಕಲ್ಪಿಸಲಾಗಿದೆ. 21 ಸಾವಿರ ಪುನರ್ವಸತಿ ‌ಕೇಂದ್ರ ಆರಂಭಿಸಲಾಗಿದೆ. ಇದುವರೆಗೆ 42,788 ಲ್ಯಾಬ್ ಪರೀಕ್ಷೆ ನಡೆಸಲಾಗಿದೆ. ದೇಶಾದ್ಯಂತ 123 ಲ್ಯಾಬ್ ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button