Latest

ವಿಶ್ವದಲ್ಲೇ ಅತ್ಯಧಿಕ ಕೊರೊನಾ ಸೋಂಕು ಭಾರತದಲ್ಲಿ ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಶ್ವದಲ್ಲೇ ಅತಿಹೆಚ್ಚು ಕೊರೊನಾ ಪ್ರಕರಣಗಳು ಭಾರತದಲ್ಲಿ ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,14,835 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,59,30,965ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 2,104 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,84,657ಕ್ಕೆ ಏರಿಕೆಯಾಗಿದೆ.

Home add -Advt

ಇನ್ನು ದೇಶದಲ್ಲಿ 22,91,428 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,34,54,880 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,78,841 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 13,23,30,644 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.
ಸೀತಾರಾಮ ಯೆಚೂರಿ ಪುತ್ರ ಕೊರೋನಾಕ್ಕೆ ಬಲಿ

Related Articles

Back to top button