Latest

ದಿನಕ್ಕೊಂದು ದಾಖಲೆ ಬರೆದ ಕೊರೊನಾ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಸಹ್ರವೇಗದಲ್ಲಿ ಹೆಚ್ಚುತ್ತಿದ್ದು, ಪ್ರತಿ ದಿನ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 34,884 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 10,38,716ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ ಬರೋಬ್ಬರಿ 671 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 26,273 ದಾಟಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ ಆರೂವರೆ ಲಕ್ಷ ದಾಟಿದೆ. ಉಳಿದಂತೆ 3,58,692 ಸಕ್ರಿಯ ಪ್ರಕರಣಗಳಿವೆ.

ಇನ್ನು ದೇಶದಲ್ಲೇ ಅತೀ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿರುವ ಮಹಾರಾಷ್ಟ್ರದಲ್ಲಿ ಮತ್ತೆ 8308 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಸತತ ಮೂರು ದಿನಗಳಿಂದಲೂ 8 ಸಾವಿರಕ್ಕಿಂತ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ ತಮಿಳುನಾಡಿನಲ್ಲಿ 4538, ಕರ್ನಾಟಕದಲ್ಲಿ 3693, ಆಂಧ್ರಪ್ರದೇಶ 2602, ಪಶ್ಚಿಮ ಬಂಗಾಳ 1894, ಬಿಹಾರದಲ್ಲಿ 1742ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ 115, ತಮಿಳುನಾಡಿನಲ್ಲಿ 79, ಆಂಧ್ರಪ್ರದೇಶ 42, ಪಶ್ಚಿಮ ಬಂಗಾಳದಲ್ಲಿ 26 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button