Latest

ದಿಢೀರ್ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 24 ಗಂಟೆಯಲ್ಲಿ ದೇಶದಲ್ಲಿ ಸೋಂಕಿತರ ಪ್ರಮಾಣ ದಿಢೀರ್ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 24 ಗಂಟೆಯಲ್ಲಿ 47,262 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,17,34,058ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 275 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ1,60,441ಕ್ಕೆ ಏರಿಕೆಯಾಗಿದೆ.

Home add -Advt

ದೇಶದಲ್ಲಿ 3,68,457 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,12,05,160 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 23,907 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 5,08,41,286 ಜನರಿಗೆ ಲಸಿಕೆ ನೀಡಲಾಗಿದೆ.

Related Articles

Back to top button