Latest

ಒಂದೇ ದಿನದಲ್ಲಿ 8 ಸಾವಿರ ಗಡಿ ದಾಟಿದ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತಿದ್ದು, ಒಂದೇ ದಿನ‌ದಲ್ಲಿ 8 ಸಾವಿರಕ್ಕೂ‌ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಭಾರತ, ಜಾಗತಿಕವಾಗಿ ಕೊರೊನಾ ಸೋಂಕು ಪೀಡಿತರ ಪಟ್ಟಿಯಲ್ಲಿ ಒಂದೇ ದಿನ 2 ದೇಶಗಳನ್ನು ಹಿಂದಿಕ್ಕಿ 7 ಸ್ಥಾನಕ್ಕೆ ಬಂದಿದೆ.

ಕಳೆದ ಎರಡು ದಿನಗಳಿಂದ ದೇಶದಲ್ಲಿ 8 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇಂದು ಒಂದೇ ದಿನ ದೇಶದಲ್ಲಿ 8,392 ಪ್ರಕರಣಗಳು ಕಂಡುಬಂದಿವೆ. ಇದರಿಂದ ಭಾರತದ ಕೊರೋನಾ ವೈರಸ್ ಪೀಡಿತರ ಸಂಖ್ಯೆ 1,90,535ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ 9ನೇ ಸ್ಥಾನದಲ್ಲಿದ್ದ ಭಾರತ ಒಂದೇ ದಿನ ಜಾಗತಿಕವಾಗಿ ಅತಿಹೆಚ್ಚು ಕೊರೊನಾ ಪೀಡಿತರಿರುವ ದೇಶಗಳ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದ ಜರ್ಮನಿ ಮತ್ತು 7ನೇ ಸ್ಥಾನದಲ್ಲಿದ್ದ ಫ್ರಾನ್ಸ್ ಅನ್ನು ಹಿಂದಿಕ್ಕಿದೆ.

8ನೇ ಸ್ಥಾನದಲ್ಲಿರುವ ಫ್ರಾನ್ಸ್ ದೇಶದ ಕೊರೋನಾ ಪೀಡಿತರ ಸಂಖ್ಯೆ 188,882 ಮತ್ತು 9ನೇ ಸ್ಥಾನದಲ್ಲಿರುವ ಜರ್ಮನಿಯ ಕೊರೊನಾ ಸೋಂಕು ಪೀಡಿತರ ಸಂಖ್ಯೆ 183,494 ಎಂದು ‘ವರ್ಲ್ಡೋಮೀಟರ್’ ವೆಬ್ ಸೈಟ್ ಮಾಹಿತಿಗಳು ತಿಳಿಸುತ್ತವೆ.

‌ನಿನ್ನೆ ಒಂದೇ ದಿನ ಕೊರೊನಾದಿಂದ 230 ಜನ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 5,394ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಈವರೆಗೆ 91,819 ಜನ ಮಾತ್ರ ಗುಣಮುಖ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button