ದೇಶದಲ್ಲಿ 96169ಕ್ಕೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 96,169ಕ್ಕೆ ಏರಿಕೆಯಾಗಿದೆ. 3,029 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 5,242 ಹೊಸ ಪ್ರಕರಣಗಳು ದೃಢಪಟ್ಟಿವೆ.

ಒಂದೇ ದಿನದಲ್ಲಿ 157 ಮಂದಿ ಸೋಂಕಿಗೆ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು 36,824 ಮಂದಿ ಗುಣಮುಖರಾಗಿದ್ದಾರೆ. 56,316 ಸೋಂಕಿತರು ಇನ್ನೂ ಕೊರೊನಾದಿಂದ ಬಳಲುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 33,053 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಭಾನುವಾರ ಒಂದೇ ದಿನ 2,347 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿದೆ. 1,198 ಮಂದಿ ಕೊರೊನಾಗೆ ಬಲಿಯಾಗಿದ್ದು, 7,688 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಗುಜರಾತ್‍ನಲ್ಲಿ 11,380 ಮಂದಿ ಸೋಂಕಿಗೆ ತುತ್ತಾಗಿದ್ದು, 659 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದರೆ, ತಮಿಳುನಾಡಿನಲ್ಲಿ 11,224 ಮಂದಿಗೆ ಕೊರೊನಾ ತಗುಲಿದ್ದು, 79 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೆಹಲಿಯಲ್ಲಿ 9,755 ಮಂದಿ ಕೊರೊನಾಗೆ ತುತ್ತಾಗಿದ್ದು, 148 ಮಂದಿ ಮೃತಪಟ್ಟಿದ್ದಾರೆ. ಸುಮಾರು 4,202 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.

ಆಂಧ್ರಪ್ರದೇಶದಲ್ಲಿ 2,380 ಮಂದಿಗೆ ಸೋಂಕು ತಗುಲಿದ್ದು, 50 ಮಂದಿ ಸಾವನ್ನಪ್ಪಿದ್ದಾರೆ. 1,456 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ತೆಲಂಗಾಣದಲ್ಲಿ 1,551 ಮಂದಿ ಕೊರೊನಾಗೆ ತುತ್ತಾಗಿದ್ದು, 34 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ. ಕೇರಳದಲ್ಲಿ 602 ಮಂದಿಯಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದ್ದು, 4 ಸೋಂಕಿತರು ಮೃತಪಟ್ಟಿದ್ದಾರೆ. 497 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಈವರೆಗೆ 1,147 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 37ಕ್ಕೆ ಏರಿದೆ. ಒಟ್ಟು 501 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button