ಕಲಬುರಗಿಯಲ್ಲಿ ಮತ್ತೊಂದು ಕೊರೊನ ಸೋಂಕು ಪ್ರಕರಣ ಪತ್ತೆ

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ದೇಶದಲ್ಲೆ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬ ಬಲಿಯಾದ ಮೊದಲ ಪ್ರಕರಣ ಕರ್ನಾಟಕದ ಕಲಬುರಗಿಯಲ್ಲಿ ಸಂಭವಿಸಿತ್ತು. ಇದೀಗ ಅದೇ ಕಲಬುರಗಿಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ.

54 ವರ್ಷದ ಮಹಿಳೆಗೆ ಕೊರೊನಾ ಸೋಂಕು ಧೃಡಪಟ್ಟಿದೆ. ದೆಹಲಿ ಜಮಾತ್‍ನಲ್ಲಿ ಭಾಗಿಯಾಗಿದ್ದ ವ್ಯಕ್ತಿಯ ಜೊತೆಗೆ ಮಹಿಳೆ ಸಂಪರ್ಕ ಹೊಂದಿದ್ದರು. ದೆಹಲಿಯ ಜಮಾತ್ ಸಭೆಗೆ ಹೋಗಿ ಬಂದಿದ್ದ ಶಹಾಬಾದ್ ಮೂಲದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ವ್ಯಕ್ತಿಯ ವರದಿ ನೆಗೆಟಿವ್ ಬಂದಿದೆ. ಆದರೆ 60 ವರ್ಷದ ಆತನ ಪತ್ನಿಗೆ ಕೊರೊನಾ ಸೋಂಕು ಇರುವುದು ಲ್ಯಾಬ್ ವರದಿಯಲ್ಲಿ ದೃಢವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಶರತ್ ಸ್ಪಷ್ಟಪಡಿಸಿದ್ದಾರೆ.

Home add -Advt

ಜಿಲ್ಲೆಯಲ್ಲಿ ಮೃತ ವ್ಯಕ್ತಿ ಸೇರಿದಂತೆ ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೆಹಲಿಯಿಂದ ವಾಪಸ್ಸಾದ 14 ಮಂದಿಯ ರಿಪೋರ್ಟ್ ಬರೋದು ಬಾಕಿಯಿದೆ. ಕೊರೊನಾ ಸೋಂಕಿತ ಮಹಿಳೆಯನ್ನು ಕಲಬುರಗಿಯ ಇಎಸ್‍ಐ ಆಸ್ಪತ್ರೆಯ ಐಸೋಲೇಷನ್‍ ವಾರ್ಡಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

Related Articles

Back to top button