ಕೊರೊನಾ ವೈರಸ್ ಗೆ ರಾಜ್ಯದಲ್ಲಿ ಮೊದಲ ಬಲಿ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿರುವ ಕೊರೋನಾ ವೈರಸ್​ ರಾಜ್ಯದಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ಕಲಬುರ್ಗಿಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿದ್ದ 76 ವರ್ಷದ ವೃದ್ಧ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವ ನಿಟ್ಟಿನಲ್ಲಿ ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಈ ನಡುವೆ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಕೊರೋನಾ ನಿಯಂತ್ರಣದ ಕುರಿತು ಚರ್ಚೆ ನಡೆಸಲಿದ್ದಾರೆ.

ಕಲಾಬುರ್ಗಿ ಜಿಲ್ಲೆಯಾದ್ಯಂತ ಎಲ್ಲೆಡೆ ಕೊರೋನಾ ಸೋಂಕಿತರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾವಾರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಸೂಚನೆ ರವಾನಿಸಲಿದ್ದಾರೆ ಎನ್ನಲಾಗುತ್ತಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button