
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಮಾರ್ಚ್ 31ರವರೆಗೆ ಇಡೀ ಕರ್ನಾಟಕವೇ ಲಾಕ್ ಡೌನ್ ಮಾಡಲಾಗುವುದು ಎಂದು ಘೋಷಿಸಿದೆ. ಆದರೂ ಜನರು ಇಂದು ಎಂದಿನಂತೆ ರಸ್ತೆಗಳಿಗೆ ಗುಂಪು ಗುಂಪಾಗಿ ಆಗಮಿಸಿದ ಹಿನ್ನಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಯಶವಂತಪುರದ ಬಳಿ ಈ ಘಟನೆ ನಡೆದಿದೆ. ಕರ್ನಾಟಕ ಸಂಪೂರ್ಣ ಲಾಕ್‍ಡೌನ್ ಆಗಿದ್ದರೂ ಜನರು ಬೆಳಗ್ಗೆಯಿಂದಲೇ ರಸ್ತೆಗೆ ಇಳಿಯುತ್ತಿದ್ದಾರೆ. ಈ ವೇಳೆ ಪೊಲೀಸರು ಮನೆಗೆ ತೆರಳುವಂತೆ ಮನವಿ ಮಾಡುತ್ತಿದ್ದರೂ ಕ್ಯಾರೇ ಎನ್ನುತ್ತಿಲ್ಲ. ಇದರಿಂದ ಜನರಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ.
ಇದೇ ವೇಳೆ ಗೋವರ್ಧನ್ ಥಿಯೇಟರ್ ಬಳಿ ಆಟೋಗಳು, ಸಾರ್ವಜನಿಕರ ಅನಗತ್ಯ ಓಡಾಟದ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ. ಈ ವೇಳೆ ಕರ್ಫ್ಯೂ ಲೆಕ್ಕಿಸದೇ ರಸ್ತೆಯಲ್ಲಿ ಓಡಾಡುತ್ತಿದ್ದ ರಿಕ್ಷಾ ಚಾಲಕರ ಮೇಲೂ ಪೊಲೀಸರು ಲಾಠಿ ಬೀಸಿದ್ದಾರೆ.
ಶಿವಾಜಿನಗರ ಮತ್ತು ಕಮರ್ಷಿಯಲ್ ಸ್ಟ್ರೀಟ್ ರಸ್ತೆಗಳಲ್ಲಿ ಜನ ಸೇರಿದ್ದರು. ಮನೆಗೆ ತೆರಳುವಂತೆ ಹೇಳಿದ ಮನವಿಗೆ ಬಗ್ಗದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ