ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಲಾಕ್‍ಡೌನ್ ಸಡಿಲಿಕೆ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮುಂಬೈನಿಂದ ಕರ್ನಾಟಕಕ್ಕೆ ವಾಪಸ್ ಆಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದ್ದು, ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಸೋಂಕಿತರು ಲಾರಿಗಳ ಮೂಲಕ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈಗಾಗಲೇ ಮುಂಬೈನಿಂದ ಅಂಬುಲೆನ್ಸ್ ನಲ್ಲಿ ಬಂದು ಮಂಡ್ಯದಲ್ಲಿ ಸೋಂಕು ಹೆಚ್ಚಾಗಿದೆ. ಹಾವೇರಿಗೂ ಮುಂಬೈನಿಂದ ಅಣ್ಣ-ತಮ್ಮ ಗೂಡ್ಸ್ ನಲ್ಲಿ ಬಂದು ಕೊರೊನಾ ಹರಡಿದ್ದಾರೆ. ಹೀಗಾಗಿ ಧಾರವಾಡಕ್ಕೂ ಆತಂಕ ಶುರುವಾಗಿದೆ.

ಮುಂಬೈ, ಪುಣೆಯಿಂದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮೂಲಕ ರಾಜ್ಯಕ್ಕೆ ಮಹಾರಾಷ್ಟ್ರದ ಜನರು ಎಂಟ್ರಿ ಕೊಡುತ್ತಿದ್ದಾರೆ. ಹಾಗಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಗ್ರಾಮದ ಬಳಿ ಸದ್ಯ ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಅಡಿಷನಲ್ ಎಸ್‍ಪಿ ಅಮರನಾಥ ರೆಡ್ಡಿ ನೇತೃತ್ವದಲ್ಲಿ ತಪಾಸಣೆ ನಡೆಸಲಾಗುತ್ತಿದೆ.

50 ಜನ ಪೊಲೀಸ್ ಸಿಬ್ಬಂದಿ ಮತ್ತು ತಾಲೂಕು ಹೆಲ್ತ್ ಆಫೀಸರ್ ನೇತೃತ್ವದಲ್ಲಿ ಇನ್ನೊಂದು ತಂಡ ಕೆಲಸ ಮಾಡುತ್ತಿದೆ. ಇದರಲ್ಲಿ ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ 30 ಮಂದಿ ಸಿಬ್ಬಂದಿ ಶಿಫ್ಟ್ ವೈಸ್‍ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಬೆಳಗಾವಿ ಡಿಸಿ ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button