
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು ಒಂದೇ ದಿನ 12 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ.
ಮೈಸೂರು ಜಿಲ್ಲೆಯೊಂದರಲ್ಲೇ 7 ಜನರಿಗೆ ಕೊರೊನಾ ವೈರಸ್ ಇರುವುದು ಪತ್ತೆಯಾಗಿದೆ. ಈ ಏಳು ಜನ ಸೋಂಕಿತರಲ್ಲಿ ಮೂವರು ದೆಹಲಿ ಜಮಾತ್ ನಿಂದ ಬಂದವರಾಗಿದ್ದರೆ, ಓರ್ವ ರೋಗಿ ನಂಬರ್ 52ರ ಸಂಪರ್ಕದಲ್ಲಿದ್ದರು. ಓರ್ವ ರೋಗಿ ನಂಬರ್ 104ರ ಸೋದರನಾಗಿದ್ದಾರೆ. ಮತ್ತೊಬ್ಬರು ದುಬೈನಿಂದ ಹಿಂದಿರುಗಿದ ವ್ಯಕ್ತಿಯಾಗಿದ್ದಾರೆ.
ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ತಲಾ ಇಬ್ಬರು ಹಾಗೂ ಬೆಂಗಳೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಇನ್ನು ಬಾಗಲಕೋಟೆಯಲ್ಲಿ ಮೃತಪಟ್ಟ ವೃದ್ಧನ ಪತ್ನಿ ಮತ್ತು ಸೋದರನಿಗೆ ಕೊರೊನಾ ವೈರಸ್ ತಗುಲಿದ್ದು, ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ