ರಾಜ್ಯದಲ್ಲಿ ಇಂದು ಮತ್ತೆ ಎರಡು ಕೊರೊನಾ ಹೊಸ ಪ್ರಕರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಬೆಂಗಳೂರಿನ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಮಡಿವಾಳದಲ್ಲಿ ಇಬ್ಬರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. 68 ವರ್ಷದ ವ್ಯಕ್ತಿ ಹಾಗೂ 62 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಇವರಿಬ್ಬರೂ ದುಬೈನಿಂದ ಬೆಂಗಳೂರಿಗೆ ವಾಪಸ್ ಆಗಿದ್ದರು. ಆರಂಭದಲ್ಲಿ ಇವರಲ್ಲಿ ಕೆಮ್ಮು, ನೆಗಡಿಯಂತಹ ಯಾವುದೇ ಕೊರೊನಾ ಸೋಂಕು ಇರಲಿಲ್ಲ. ಆದರೆ ಚಿಕಿತ್ಸೆಗೆ ಒಳಪಡಿಸಿದದಾಗ ಇವರಲ್ಲಿ ಸೋಂಕು ಇರುವುದು ಖಚಿತವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಇಲಾಖೆ, ರಾಜ್ಯದಲ್ಲಿ ಇಂದು ಎರಡು ಹೊಸ ಸೋಂಕಿತ ಪ್ರಕರಣ ಪತ್ತೆಯಾಗಿರುವುದನ್ನು ದೃಢಪಡಿಸಿದೆ. ಬೆಂಗಳೂರಿನ ಮಡಿವಾಳದಲ್ಲಿ ವಾಸವಾಗಿರುವ ಗಂಡ-ಹೆಂಡತಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ದಂಪತಿಗಳು ಮಾ. 22ರಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದರು. ಅವರಿಗೆ ಕೊರೋನಾ ವೈರಸ್ ತಗಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button