ರಾಜ್ಯದಲ್ಲಿ ಇಂದು 36 ಜನರಲ್ಲಿ ಕೊರೊನಾ ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಹೊಸದಾಗಿ 36 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಆಲ್ಖೆ ನೀಡಿದ ಸಂಜೆಯ ಬುಲೆಟಿನ್ ಪ್ರಕಾರ ಇಂದು ರಾಜ್ಯದಲ್ಲಿ 36 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಬೆಂಗಳೂರಿನಲ್ಲಿ 16, ಹಾಸನ 3 ಕಲಬುರಗಿ 8, ಶಿವಮೊಗ್ಗ 3, ಮಂಡ್ಯದಲ್ಲಿ 1, ಬಾಗಲಕೋಟೆ, ಬಳ್ಳಾರಿ, ಧಾರವಾಡ, ದಾವಣಗೆರೆ, ಉಡುಪಿಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಈ ವರೆಗೆ ಸೋಂಕಿಗೆ 36 ಜನ ಬಲಿಯಾಗಿದ್ದಾರೆ. 1092 ಜನ ಸೋಂಕಿತರ ಪೈಕಿ 496 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button