ರಾಜ್ಯದಲ್ಲಿ ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಹರಡಿದ ಕೊರೊನಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಮಹಾಮಾರಿ ಕೊರೊನಾ ದಾಖಲೆ ಪ್ರಮಾಣದಲ್ಲಿ ಹೆಚ್ಚಿದ್ದು, 48 ಜನರಲ್ಲಿ ಕೊವಿಡ್-19 ಪಾಸಿಟೀವ್ ಕಂಡುಬಂದಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ.

ಬೆಳಗಾವಿ, ಉತ್ತರ ಕನ್ನಡ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಕೊರಿನಾ ಸೋಂಕು ಅಟ್ಟಹಾಸ ಮೆರೆಯುತ್ತಿದೆ. ಬೆಳಿಗ್ಗಿನ ಹೆಲ್ತ್ ಬುಲೆಟಿನ್ ಪ್ರಕಾರ 45 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈಗ ಸಂಜೆ ವೇಳೆ ಚಿತ್ರದುರ್ಗದಲ್ಲಿ 3 ಜನರಲ್ಲಿ ಕೊರೊನಾ ಪಾಸಿಟೀವ್ ಕಂಡುಬಂದಿದ್ದು, ಈ ಮೂಲಕ ಇಂದು 48 ಜನರಲ್ಲಿ ಸೋಂಕು ಪತ್ತೆಯಾದಂತಾಗಿದೆ.

ಬೆಳಗಾವಿಯಲ್ಲಿ 11, ಚಿತ್ರದುರ್ಗ ಜಿಲ್ಲೆಯಲ್ಲಿ 3, ದಾವಣಗೆರೆಯಲ್ಲಿ 14, ಉತ್ತರ ಕನ್ನಡ 12, ಬೆಂಗಳೂರಿನಲ್ಲಿ 7 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಒಟ್ಟಾರೆ ಲಾಕ್ ಡೌನ್ ಸಡಿಲಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಕೊರೊನಾ ವೈರಸ್ ಸ್ಫೋಟಗೊಂಡಿದ್ದು, ಕರ್ನಾಟಕದಲ್ಲಿ ಆತಂಕವನ್ನು ಹೆಚ್ಚಿಸಿದೆ.

ಬೆಳಗಾವಿಯಲ್ಲಿ 11 ಸೇರಿದಂತೆ ರಾಜ್ಯದಲ್ಲಿ ಇಂದು 45 ಜನರಿಗೆ ಕೊರೋನಾ ಸೋಂಕು ದೃಢ

ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು: ಗರ್ಭಪಾತ ಮಾಡಿಸಿದ ವೈದ್ಯರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button