Latest

ರಾಜ್ಯದಲ್ಲಿ ಇಂದು 54 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಲಾಕ್ ಡೌನ್ ಸಡಿಲಿಕೆ ನಡುವೆಯೇ ಆತಂಕವನ್ನು ಹೆಚ್ಚಿಸಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 54 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1146ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು ಮಧ್ಯಾಹ್ನದವರೆಗೆ ರಾಜ್ಯದಲ್ಲಿ 54 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಮಂಡ್ಯ 22, ಕಲಬುರಗಿ 11, ಹಾಸನ 6, ಧಾರವಾಡ 4, ಯಾದಗಿರಿ 3, ದಕ್ಷಿಣ ಕನ್ನಡ 2, ಕೋಲಾರ 2, ವಿಜಯಪುರ 2, ಶಿವಮೊಗ್ಗ 1, ಉಡುಪಿ 1 ಪ್ರಕರಣ ದಾಖಲಾಗಿದೆ. ಇಂದು ಪತ್ತೆಯಾದ 54 ಪ್ರಕರಣದಲ್ಲಿ 40 ಜನರಿಗೆ ಮಹಾರಾಷ್ಟ್ರದ ನಂಟಿದೆ. ಅಲ್ಲದೇ 10 ವರ್ಷದ ಒಳಗಿನ 7 ಮಕ್ಕಳಲ್ಲಿ ಸೋಂಕು ಕಂಡು ಬಂದಿದೆ.

ಇನ್ನು ಉಡುಪಿಯಲ್ಲಿ ಕೊರೊನಾ ಸೋಂಕಿಗೆ ಓರ್ವರು ಬಲಿಯಾಗಿದ್ದಾರೆ. 54 ವರ್ಷದ ವ್ಯಕ್ತಿ ಕೋರೊನಾಗೆ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button