ರಾಜ್ಯದಲ್ಲಿ 88ಕ್ಕೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 5 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 88ಕ್ಕೆ ಏರಿಯಾಗಿದೆ.

ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಪ್ರಕಾರ ಬೆಂಗಳೂರು- 41, ಚಿಕ್ಕಬಳ್ಳಾಪುರ- 8, ಮೈಸೂರು- 12, ದಕ್ಷಿಣ ಕನ್ನಡ- 7, ಉತ್ತರ ಕನ್ನಡ- 7, ಕಲಬುರಗಿ- 3, ದಾವಣಗೆರೆ- 3, ಉಡುಪಿ- 3, ಕೊಡಗು- 1, ಧಾರವಾಡ- 1, ತುಮಕೂರಿನಲ್ಲಿ ಇಬ್ಬರಿಗೆ ಸೋಂಕು ಇರುವುದು ಧೃಡಪಟ್ಟಿದೆ. ಇದರಲ್ಲಿ ಕೇವಲ 5 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಇದವರೆಗೂ 1,071 ಸೋಂಕಿತ ಪ್ರಕರಣಗಳು ದಾಖಲಾಗಿವೆ. ಇಂದು ಪಶ್ಚಿಮ ಬಂಗಾಳದಲ್ಲಿ ಮತ್ತೋರ್ವ ಮಹಿಳೆ ಸಾವನ್ನಪ್ಪುವ ಮೂಲಕ ದೇಶದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button