ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ರಾಜ್ಯಕ್ಕೂ ಕಾಡುತ್ತಿದ್ದು, ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇನ್ನೋರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಗ್ರೀಸ್‍ನಿಂದ ಆಗಮಿಸಿದ 26 ವರ್ಷದ ಯುವಕನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಯುವಕನ ಆರೋಗ್ಯ ಸ್ಥಿರವಾಗಿದ್ದು ಆಸ್ಪತ್ರೆಯಲ್ಲಿ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಈ ವರೆಗೆ 1,220 ಮಂದಿಯನ್ನು ನಿಗಾ ವಹಿಸಲಾಗಿದ್ದು, 906 ಜನ ಮನೆಯಲಿದ್ದರೆ 18 ಜನರನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ಕೊರೊನಾ ಶಂಕೆ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ 12, ಹಾಸನದಲ್ಲಿ 2, ದಕ್ಷಿಣ ಕನ್ನಡದಲ್ಲಿ 3, ಬಳ್ಳಾರಿಯಲ್ಲಿ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ರಕ್ತದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ದೇಶಾದ್ಯಂತ ಈ ವರೆಗೆ 74 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ