
ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಕೊರೊನಾ ವೈರಸ್ ರಾಜ್ಯದಲ್ಲಿ ಅಟ್ಟಹಾಸ ಮುಂದುವರೆಸಿದ್ದು, ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
ಈ ಕುರಿತು ಬಳ್ಳಾರಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಚಿಕ್ಕಬಳ್ಳಾಪುರ ಜಿಲ್ಲೆ ಗೌರಿ ಬಿದನೂರಿನಲ್ಲಿ ನಿನ್ನೆ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಈಗ ಅವರ ಕುರಿತ ಲ್ಯಾಬ್ ವರದಿ ಬಂದಿದ್ದು, ಕೊರೂನಾ ಸೋಂಕಿನಿಂದಲೇ ಮಹಿಳೆ ಮೃತಪಟ್ಟಿರುವುದು ದೃಢಪಟ್ಟಿದೆ ಎಂದಿದ್ದಾರೆ.
ಈ ಹಿಂದೆ ಕಲಬುರಗಿಯಲ್ಲಿ ವ್ಯಕ್ತಿಯೊಬ್ಬರು ಈ ಸೋಂಕಿಗೆ ಬಲಿಯಾಅಗಿದ್ದರು. ಇದೀಗ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಮೃತ ಪಟ್ಟವರ ಸಂಖ್ಯೆ ಎರಡಕ್ಕೇರಿದೆ. ರಾಜ್ಯದಲ್ಲಿ 1.42 ಲಕ್ಷ ಜನರನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 52 ಜನರಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, 2242 ಜನರಲ್ಲಿ ನೆಗೆಟೀವ್ ಬಂದಿದೆ. 216 ಜನರನ್ನು ಐಸೋಲೇಷನ್ ನಲ್ಲಿ ಇಡಲಾಗಿದೆ ಎಂದು ಹೇಳಿದರು.