ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸೋಂಕು ಹರಡದಂತೆ ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಗೆ ತಂದರೂ ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. 227 ಹೊಸ ಪ್ರಕರಣ ದಾಖಲಾಗುವ ಮೂಲಕ ಕೊರೊನಾ ಸೋಂಕು ತಗುಲಿದವರ ಸಂಖ್ಯೆ 1251ಕ್ಕೆ ಏರಿಕೆ ಆಗಿದೆ. ಅಲ್ಲದೇ ಸೋಂಕಿಗೆ ಬಲಿಯಾದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, 1,117 ಮಂದಿಯಲ್ಲಿ ಈಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. 102 ಮಂದಿ ಸೋಂಕಿನಿಂದ ಮುಕ್ತಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. 225 ಹೊಸ ಪ್ರಕರಣಗಳ ಪೈಕಿ 25 ಪ್ರಕರಣಗಳು ದೆಹಲಿಯಲ್ಲೇ ದಾಖಲಾಗಿದೆ.
ಈ ನಡುವೆ ಇಂದು ಕೇರಳದಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ಇದು ಎರಡನೇ ಕೊರೋನಾ ಸಾವಿನ ಪ್ರಕರಣವಾಗಿದ್ದು, ತಿರುವನಂತಪುರಂನ 68 ವರ್ಷದ ಅಬ್ದುಲ್ ಅಜೀಜ್ ಕೊರೋನಾಗೆ ಬಲಿಯಾದ ವ್ಯಕ್ತಿ. ಈತ ವಿದೇಶಕ್ಕೆ ಹೋಗಿರಲಿಲ್ಲ ಆದರೆ ಕೆಲವು ಮದುವೆಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ