
ಪ್ರಗತಿವಾಹಿನಿ ಸುದ್ದಿ; ದಕ್ಷಿಣ ಕನ್ನಡ: ಕೊರೊನಾ ವೈರಸ್ ಭೀತಿ ಹೆಚ್ಚಿದ ಹಿನ್ನಲೆಯಲ್ಲಿ ಪ್ರಮುಖ ಪುಣ್ಯ ಕ್ಷೇತ್ರ ಹಾಗೂ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಇಳಿಮುಖವಾಗಿದೆ. ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ, ನಾಗ ಪ್ರತಿಷ್ಠೆ, ಆಶ್ಲೇಷಾ ಬಲಿ ಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳಲ್ಲಿ ತಲಾ ಇಬ್ಬರು ಮಾತ್ರ ಬರುವಂತೆ ಸೂಚನೆ ನೀಡಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ವಿವಿಧ ಪೂಜಾ ಕಾರ್ಯಗಳಲ್ಲಿ ಇಷ್ಟು ದಿನ ಕುಟುಂಬ ಸದಸ್ಯರು ಪಾಲ್ಗೊಳ್ಳುತ್ತಿದ್ದರು. ಆದರೆ ಕೊರೊನಾ ಭೀತಿ ಹಿನ್ನೆಲೆಯಲ್ಲಿ ತಲಾ ಇಬ್ಬರಂತೆ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದಿದೆ.
ಇನ್ನು ಕಾವೇರಿ ಉಗಮ ಸ್ಥಾನ ತಲಕಾವೇರಿಗೂ ಕೊರೋನಾ ವೈರಸ್ ಬಿಸಿ ತಟ್ಟಿದ್ದು, ದೇವಾಲಯದಲ್ಲಿ ಭಕ್ತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ತಲಕಾವೇರಿ ಭಾಗಮಂಡಲ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ವಿರಳವಾಗಿದೆ. ಬ್ರಹ್ಮಗಿರಿ ಬೆಟ್ಟಕ್ಕೂ ನಿಷೇಧ ಹೇರಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ