ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಸೋಂಕು ಕೈಮೀರಿ ಹರಡುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಎರಡೂ ಜಿಲ್ಲೆಗಳನ್ನ ಮಂಗಳವಾರದಿಂದ ಒಂದು ವಾರ ಕಾಲ ಕಟ್ಟುನಿಟ್ಟಾಗಿ ಲಾಕ್ಡೌನ್ ಮಾಡಲು ಈಗಾಗಲೇ ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಬೆನ್ನಲ್ಲೇ ಕೊರೊನಾ ಸೋಂಕು ಕಟ್ಟಿಹಾಕಲು ಇನ್ನೂ ಹಲವು ಜಿಲ್ಲೆಗಳನ್ನ ಲಾಕ್ಡೌನ್ ಮಾಡಲು ಸರ್ಕಾರ ಚಿತ್ತ ಹರಿಸಿದೆ.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಇತರ ಜಿಲ್ಲೆಗಳಲ್ಲೂ ಲಾಕ್ಡೌನ್ ಮಾಡುವ ಬಗ್ಗೆ ಗಂಭೀರ ಚರ್ಚೆಯಾಗಿದೆ. ಅಲ್ಲದೇ ಲಾಕ್ಡೌನ್ ಮಾರ್ಗಸೂಚಿಗಳ ಬಗ್ಗೆಯೂ ಚರ್ಚೆಯಾಗಿದೆ.
ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೊರೋನಾ ವೈರಸ್ ಸೋಂಕು ಬಹಳ ತೀವ್ರವಾಗಿರುವ ಇತರ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಚರ್ಚೆಗಳಾಗಿವೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಸೇರಿ ಒಟ್ಟು 12 ಜಿಲ್ಲೆಗಳಲ್ಲಿ ಹೆಚ್ಚು ಗಂಭೀರತೆ ಇದೆ ಎಂದು ಪರಿಗಣಿಸಲಾಗಿದೆ. ಎರಡು ಹಂತದಲ್ಲಿ ಲಾಕ್ಡೌನ್ ಮಾಡುವ ಬಗ್ಗೆ ನಾಳೆ ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ