ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್ – 19ರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಲಾಕ್ ಡೌನ್ ಇರುವುದರಿಂದ ವಾಹನ ತೆರಿಗೆ ಪಾವತಿಸಲು ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ.
ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 4(1)ರ ನಿಯಮಗಳನ್ನು ಸಡಿಲಗೊಳಿಸಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ದಿನಾಂಕ:15-04- 2020 ಮತ್ತು 15-05-2020ರ ಒಳಗಾಗಿ ಪಾವತಿಸಬೇಕಾಗಿದ್ದ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ದಿನಾಂಕ :01-06-2020ರ ವರೆಗೆ ವಿಸ್ತರಿಸಿ ಆದೇಶಿಸಿದೆ.
ವಾಹನ ಮಾಲೀಕರು ಇದನ್ನು ಸದುಪಯೋಗ ಪಡೆಸಿಕೊಂಡು ಲಾಕ್ ಡೌನ್ ಅನ್ನು ಯಶಸ್ವಿಗೊಳಿಸುವ ಮೂಲಕ ಕರೋನಾ ಪಿಡುಗನ್ನು ತಡೆಗಟ್ಟುವ ಸರ್ಕಾರದ ಪ್ರಯತ್ನಕ್ಕೆ ಸಹಕರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ